ನಾಳೆಯಿಂದ 14 ರವರೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿ
ಬಳ್ಳಾರಿ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಲ್ಲೇಶ್ವರಂ, ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ 2025-26 ರ ರಾಜ್ಯ ಮಟ್ಟದ ಪದ
ಡಿ.12 ರಿಂದ 14 ರವರೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿ


ಡಿ.12 ರಿಂದ 14 ರವರೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿ


ಬಳ್ಳಾರಿ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಲ್ಲೇಶ್ವರಂ, ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ 2025-26 ರ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿಗಳನ್ನು ನಾಳೆಯಿಂದ ಡಿ.14 ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ನಾಳೆ ಸಂಜೆ 04 ಗಂಟೆಗೆ ಪಂದ್ಯಾವಳಿಗಳ ಉದ್ಘಾಟನೆ ನಡೆಯಲಿದೆ. ಡಿ.14 ರಂದು ಸಮಾರೋಪ ಸಮಾರಂಭ ನಡೆಯಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗು ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕ ಭರತ್.ಎಸ್., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಬಳ್ಳಾರಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹೆಚ್.ಎಸ್ ಶಿವರಾಮ್, ಉಪಧ್ಯಾಕ್ಷರಾದ ಬಿ.ಸುಲೇಖ, ಸೇಂಟ್ ಜಾನ್ಸ್ ಸಂಸ್ಥೆಗಳ ಆಡಳಿತ ಮಂಡಳಿಯ ಫಾ.ಫ್ರಾನ್ಸಿಸ್, ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಾಗರಾಜ್ ಹವಾಲ್ದಾರ್, ಕಾರ್ಯಾಧ್ಯಕ್ಷ ಎಂ. ಶ್ರೀಶೈಲ, ಕಾರ್ಯದರ್ಶಿ ಪಿ.ನಾಗೇಶ್ವರ ರಾವ್, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಬೋಧಕೇತರ ನೌಕರರ ಸಂಘದ ರಾಜಾಧ್ಯಕ್ಷ ಮಧುಸೂದನ್ ಮಾಗಿ, ಜಿಲ್ಲಾ ಉಪನ್ಯಾಸಕರ ಸಂಘ ಅಧ್ಯಕ್ಷ ಎಂ.ರಾಜಣ್ಣ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸಿ.ಕೋಟ್ರೇಶ್, ವಿಜಯನಗರ ಜಿಲ್ಲಾ ಉಪನ್ಯಾಸಕರ ಸಂಘ ಅಧ್ಯಕ್ಷ ಗೌಡ್ರು ಬಸವರಾಜ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಅಧ್ಯಕ್ಷ ಟಿ.ಆರ್ ಬಸವರಾಜು, ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಅಧ್ಯಕ್ಷ ಸಂತೋಷ್ ರೆಡ್ಡಿ.ಆರ್., ಕಾರ್ಯದರ್ಶಿ ತಿರುಪತಿ ನಾಯಕ, ರಾಜ್ಯ ಮಟ್ಟ ಹಾಕಿ ಪಂದ್ಯಾವಳಿ ಸಂಘಟನಾ ಕಾರ್ಯದರ್ಶಿ ಹಾಗೂ ಬಳ್ಳಾರಿ ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಎಸ್.ಶಿವರಾಮ್ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ವರ್ಗ, ಇತರರು ಉಪಸ್ಥಿತರಿರುವರು ಎಂದು ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಲಕ್ಷ್ಮಣ.ಆರ್.ಹಳ್ಳದಮನಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande