ಅರಿವು ಸಾಲ : ಅರ್ಜಿ ಸಲ್ಲಿಕೆ
ಕೊಪ್ಪಳ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 3 ರವರೆಗೆ ವಿಸ್ತರಿಸಲಾಗಿದೆ. ಕ
ಅರಿವು ಸಾಲ : ಅರ್ಜಿ ಸಲ್ಲಿಕೆ


ಕೊಪ್ಪಳ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 3 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್/ಡಿ.ಸಿ.ಇ.ಟಿ/ ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS) , ದಂತ ವೈದ್ಯಕೀಯ (BDS, MDS), ಆಯುಷ್ (B.Ayush, M.Ayush) , ಇಂಜಿನೀಯರಿAಗ್ & ಟೆಕ್ನಾಲಜಿ (B.E/ B.Tech/ M.E/ M.Tech) , ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch/ M.Arch) MBA, MCA, LLB,, B.Sc in Horticulture, Agricultural Engg, Dairy Technology, Forestry,Veternary and Animal Sciences, Fisheries, Sericulture. Home/ Community Sciences, Food Nutrition and Dietetics, B.Pharma, M.Pharma, Pharma.D, And D.Pharma ಗಳಲ್ಲಿ ಆಯ್ಕೆಯಾದಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 3 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಸದ್ಯ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 3 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೇಕಾಗಿರುತ್ತದೆ. (ಶೇ.12 ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು.)

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ವೆಬ್ ಸೈಟ್: www.kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ ಭವನ, ಹೊಸಪೇಟೆ ರಸ್ತೆ ಕೊಪ್ಪಳ–583231, ದೂರವಾಣಿ ಸಂಖ್ಯೆ; 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande