
ವಿಜಯಪುರ, 12 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಏಳು ಜನ ಪುರುಷ ಶಿಕ್ಷಾ ಬಂದಿಗಳನ್ನು ಸರ್ಕಾರದ ಆದೇಶದಂತೆ ಅವಧಿ ಪೂರ್ವ ಬಿಡುಗಡೆಗೊಳಿಸಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಕಾರಾಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಬಿಡುಗಡೆಯಾದ ಬಂದಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವನ ನಡೆಸುವಂತೆ ಶುಭ ಹಾರೈಸಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರಾಗೃಹದ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande