
ವಿಜಯಪುರ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದ 12 ಜನ ವಿದ್ಯಾರ್ಥಿಗಳು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ. ಯಂತ್ರಗಳ ಉತ್ಪಾದಕ ಸಂಸ್ಥೆ ಡಿ ಎನ್ ಸೊಲುಶನ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೊಗ ಗಿಟ್ಟಿಸಿದ್ದಾರೆ.
ಡಿ. ಎನ್. ಸೊಲುಶನ್ಸ್ ಸಂಸ್ಥೆಯ ಬೆಂಗಳೂರು ವಿಭಾಗದ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ವಿಭಾಗದ ಸ್ಮೀತಾ ಆರ್. ಅವರು ಶುಕ್ರವಾರ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಸಿ ಆಯ್ಕೆಯಾದ 12 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗ ವಿಭಾಗದ ಅಧಿಕಾರಿ ಸುಧನ್ವ, ವಿ. ಕುಲಕರ್ಣಿ, ಸಂತೋಷ ಹಿರೇಮಠ, ಪಾಂಡುರಂಗ ಅಸ್ಲಂಕರ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಎಂ. ಸಿ. ಬಿರಾದಾರ, ಕಂಪ್ಯೂಟರ ಸಾಯಿನ್ಸ್ ವಿಭಾಗದ ಮುಖ್ಯಸ್ಥ ಎಂ. ಎಸ್. ಬೇನಾಳ, ಸಿವ್ಹಿಲ್ ವಿಭಾಗದ ಮುಖ್ಯಸ್ಥೆ ಸುನಿತಾ ಲಕ್ಷಾಣಿ, ಇ ಮತ್ತು ಸಿ ವಿಭಾಗದ ಮುಖ್ಯಸ್ಥೆ ಸುರೇಖಾ ಸುಣಗಾ, ಇ ಮತ್ತು ಇ ವಿಭಾಗದ ಮುಖ್ಯಸ್ಥೆ ಸವಿತಾ ಜೋಶಿ ಹಾಗೂ ನಾನಾ ವಿಭಾಗಗಳ ಉದ್ಯೋಗ ವಿಭಾಗದ ಅಧಿಕಾರಿಗಳು, ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಬ. ಪಾಟೀಲ ಹಾಗೂ ಸಂಸ್ಥೆಯ ಎಲ್ಲ ಆಡಳಿತ ಮಂಡಳಿ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande