
ಬಳ್ಳಾರಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಮ್ಮ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ತೋರಿದ ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್ ಅವರು ತಿಳಿಸಿದ್ದಾರೆ.
ಇಂದಿರಾನಗರ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ 2025-26 ರಲ್ಲಿ ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕøತಿಕ, ಸಾಹಿತ್ಯ, ಕಲಾ, ಪ್ರಬಂಧ, ಸಂಸ್ಕೃತ ಮತ್ತು ಅರಬೀಕ್ ಧಾರ್ಮಿಕ ಪಠಣ, ಚಿತ್ರಕಲೆ, ಕಂಠಪಾಠ, ಆಶುಭಾಷಣ, ಕ್ಲೆ ಮಾಡಲ್, ರಂಗೋಲಿ, ಭರತನಾಟ್ಯ, ಕವ್ವಾಲಿ ಮತ್ತು ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು 30 ಪ್ರಶಸ್ತಿಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದನ್ನು ಶ್ಲಾಘಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಈ ಸಾಧನೆ ನಮ್ಮ ಸಂಸ್ಥೆಯ ಮೌಲ್ಯಗಳು ಮತ್ತು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಫಲವಾಗಿದೆ. ಅಲ್ಲದೇ, ನಮ್ಮ ಸಂಸ್ಥೆಯಲ್ಲಿ ಕೇವಲ ಶಿಕ್ಷಣವನ್ನು ಬೋಧಿಸುವುದಿಲ್ಲ, ಬದಲಾಗಿ ವ್ಯಕ್ತಿತ್ವ ರೂಪುಗೊಳ್ಳುವಲ್ಲಿ ಅಗತ್ಯವಿರುವ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲಾಗತ್ತದೆ ಎನ್ನುವುದು ಸಾಬೀತಾಗುತ್ತದೆ ಎಂದರು.
ಶಾಲಾ ಮುಖ್ಯಗುರುಗಳಾದ ವೀರೇಶ್. ಯು ಅವರು, ವಿದ್ಯಾರ್ಥಿಗಳ ಪ್ರಸ್ತುತ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಮತ್ತು ಸಾಧನೆಯು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪ್ರೋತ್ಸಾಹಿಸುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್