
ಹುಬ್ಬಳ್ಳಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ಅರವಿಂದ್ ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ವಿಭಾಗೀಯ ಮಟ್ಟದ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ ಹಾಗೂ ಆತ್ಮನಿರ್ಭರ ಭಾರತ ಮತ್ತು ವಂದೇ ಮಾತರಂ@150 ವಿಷಯದ ಕುರಿತಾದ ಕಾರ್ಯಗಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿಯಾಗಿದ್ದರು.
ಈ ಕಾರ್ಯಾಗಾರದದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಬಂಧ ಪಟ್ಟಂತೆ ಕರ್ನಾಟಕದಲ್ಲಿ ಮಹಿಳಾ ಸುರಕ್ಷತೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸರ್ಕಾರದ ನಿಷ್ಕ್ರಿಯತೆ, ಸ್ವದೇಶಿ ಉತ್ಪನ್ನಗಳ ಕುರಿತು ಚರ್ಚಿಸಲಾಯಿತು.
ಮಹಿಳಾ ಮೋರ್ಚಾದ ಪದಾಧಿಕಾರಿಗಳೊಂದಿಗೆ ಪಕ್ಷದ ಬಲವರ್ಧನೆ, ಮುಂದಿನ ಸಂಘಟನೆ ಚಟುವಟಿಕೆಗಳು ಮತ್ತು ಜನಸಂಪರ್ಕ ಕಾರ್ಯಕ್ರಮಗಳ ಕುರಿತು ಸಚಿವರು ಸಮಾಲೋಚನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa