ಹೊಸಪೇಟೆ : ವಿಜಯನಗರ ಜಿಲ್ಲೆ ಶಿಕ್ಷಕರ ಸಹಪಠ್ಯ ಸ್ಪರ್ಧೆಗಳು
ಹೊಸಪೇಟೆ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಅಮರಾವತಿಯಲ್ಲಿ ಇರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾ
ac63a6018a1555fa8484f181956d40f0_84039822.jpg


ಹೊಸಪೇಟೆ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಅಮರಾವತಿಯಲ್ಲಿ ಇರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಯಿತು.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ, ಹೊಸಪೇಟೆ ಜಂಟಿಯಾಗಿ ಏರ್ಪಡಿಸಿದ್ದವು.

ಉಪ ನಿರ್ದೇಶಕರಾದ ವೆಂಕಟೇಶ್ ರಾಮಚಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಕರ ದೈನಂದಿನ ಶೈಕ್ಷಣಿಕ ಒತ್ತಡಗಳನ್ನು ದೂರ ಮಾಡಲು ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ. ಅಷ್ಟೇ ಅಲ್ಲ, ಶಿಕ್ಷಕರಲ್ಲಿಯ ಪ್ರತಿಭೆಗಳ ಪ್ರದರ್ಶನಕ್ಕೂ ಅನುಕೂಲವಾಗಲಿದೆ ಎಂದರು.

ನೋಡಲ್ ಅಧಿಕಾರಿಗಳಾದ ರಾಜಶೇಖರ್ ಅವರು, ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಆಶುಬಾಷಣ, ಭಕ್ತಿಗೀತೆ, ಸ್ಥಳದಲ್ಲಿ ಕಲಿಕೋಪಕರಣ ತಯಾರಿಕೆ, ರಸಪ್ರಶ್ನೆ ಸೇರಿದಂತೆ 07 ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜೇತರು ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರಭಾರ ಪ್ರಾಚಾರ್ಯರಾದ ಶ್ರೀಮತಿ ವೀಣಾಕುಮಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ವಿಷಯ ಪರಿವೀಕ್ಷಕರಾದ ಹೆಚ್.ಎಂ. ವಿಶ್ವನಾಥ ಬಸವಂತಯ್ಯ ಹಿರೇಮಠ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ವೆಂಕಟೇಶ್ ಕುಲಕರ್ಣಿ, ಶ್ರೀಮತಿ ಪ್ರವೀಣಾ ಬಿ ಹಲಗಣಿ, ಸಂಘದ ಪದಾಧಿಕಾರಿಗಳಾದ ಸಿದ್ಧಾರಾಧ್ಯ, ಬಸವರಾಜ. ಕೆ. ಆರ್.ಬಿ. ಬಸವರಾಜ, ಟಿ. ವಿಶ್ವನಾಥ, ಕೆ.ಬಿ. ತಿಮ್ಮಪ್ಪ ವೇದಿಕೆಯಲ್ಲಿದ್ದರು.

ಕೆ.ಬಿ. ತಿಮ್ಮಪ್ಪ ಹಾಗೂ ಶ್ರೀಮತಿ ಯೋಗಿಶ್ವರಿ ಕಾರ್ಯಕ್ರಮ ನಿರ್ವಹಿಸಿದರು. ಬಸವಂತಯ್ಯ ಹಿರೇಮಠಯ್ಯ ಅವರು ಸ್ವಾಗತಿಸಿದರು. ಶ್ರೀಮತಿ ರಾಜೇಶ್ವರಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande