ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಹಾಸನ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಹಾಸನ ಇವರ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ಜನಾಂಗದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ ಸಿಇಟಿ/ಡಿ.ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪ್ರವ
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಹಾಸನ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಹಾಸನ ಇವರ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ಜನಾಂಗದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ ಸಿಇಟಿ/ಡಿ.ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ (ರಿನ್ಯೂವಲ್) ಯೋಜನೆಯಡಿಯಲ್ಲಿ ಸೌಲಭ್ಯ ನೀಡಲು Website : www.kmdconline.karnataka.gov.in ಮೂಲಕ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 03-01-2026 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ) ಮೌಲಾನಾ ಆಜಾದ್ ಭವನ, 1ನೇ ಮಹಡಿ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಶ್ರೀ ವಿದ್ಯಾ ಗಣಪತಿ ಅಡ್ಡರಸ್ತೆ, ಮಲ್ನಾಡ್ ಇಂಜಿನಿಯರಿAಗ್ ಕಾಲೇಜ್ ಹತ್ತಿರ, ಹಾಸನ-573202 ದೂರವಾಣಿ ಸಂಖ್ಯೆ: 08172-246333 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande