
ಹುಬ್ಬಳ್ಳಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೇಳವನ್ನು ಆಯೋಜಿಸಲಾಗಿದೆ. ರೈತರು ಹೊಸ ಹೊಸ ಯೋಜನೆಗಳನ್ನು ರೂಪಿಸಲು ಮೇಳ ಸಹಾಯಕವಾಗಲಿದೆ. ಸಾವಯವ ಕೃಷಿ ಬೆಳೆಸಲು ಫಲಪುಷ್ಪ ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿ ಇಂದಿರಾ ಗಾಜಿನ ಮನೆಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಧಾರವಾಡ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಹಾಪ್ ಕಾಮ್ಸ ಧಾರವಾಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ, ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ, ವಾಣಿಜ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ರೀತಿಯ ರಾಸಾಯನಿಕ ಬಳಸದೇ ಅತ್ಯುತ್ತಮ ಬೆಳೆ ಬೆಳೆಯಲು ಸಾಧ್ಯವಿದೆ. ವಾಣಿಜ್ಯ ಬೆಳೆಗಳನ್ನು ಸಹ ಬೆಳೆಯಬಹುದಾಗಿದೆ. ಆಹಾರ ಪದಾರ್ಥಗಳನ್ನು ಬಳಸಿಕೊಂಡು ಉತ್ತಮ ಕಲಾಕೃತಿಗಳನ್ನು ಕೆತ್ತನೆ ಮಾಡಲಾಗಿದೆ. ಕೃಷಿ ಧಾನ್ಯ, ಪುಷ್ಪ, ಸಾಮಗ್ರಿಗಳನ್ನು ಬಳಸಿಕೊಂಡು ಸದ್ಗುರು ಸಿದ್ಧಾರೂಢರ ಪ್ರತಿಮೆ ತಯಾರಿಸಲಾಗಿದೆ. ಮನೆಯಲ್ಲಿ ಸಹ ತೋಟಗಾರಿಕೆಯನ್ನು ಮಾಡಬಹುದಾಗಿದೆ. ಮೀನುಗಾರಿಕೆಗೆ ಸಹ ಹೆಚ್ಚಿನ ಒತ್ತು ನೀಡಲಾಗಿದೆ. ಒಟ್ಟಿನಲ್ಲಿ ಫಲಪುಷ್ಪ ಪ್ರದರ್ಶನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa