
ಹಾಸನ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಕಲಚೇತನರುಗಳ ಕುಂದುಕೊರತೆ ಸಭೆ ನಡೆಯಲಿದ್ದು, ಸದರಿ ಸಭೆಗೆ ಜಿಲ್ಲೆಯಲ್ಲಿನ ವಿಕಲಚೇತನರು/ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೆ.ಆರ್.ಪುರಂ, ಹಾಸನ ರವರ ದೂರವಾಣಿ ಸಂಖ್ಯೆ: 08172-264546/48 ನ್ನು ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa