
ಗದಗ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. “ನಾನು ಹೈಕಮಾಂಡ್ ಹೇಳಿದ0ತೆ ಕೇಳುತ್ತೇನೆ” ಎಂದು ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು. ಶಾಸಕ ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಿರ್ಧಾರವೇ ಅಂತಿಮ ಎಂದು ಹೇಳಿದರು.
ಇದೇ ವೇಳೆ ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಸಂಬಂಧ ಎಲ್ಲ ಪ್ರಶ್ನೆಗಳಿಗೆ ಅಧಿವೇಶನದಲ್ಲೇ ಉತ್ತರ ನೀಡುವುದಾಗಿ ಹೇಳಿದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಗೊಂದಲ ಇಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / lalita MP