ಬಂಜಾರ ಸೇವಲಾಲ್ ಭವನದ ನೂತನ ಕಟ್ಟಡ ಉದ್ಘಾಟನೆ
ತುಮಕೂರು, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಸರಸ್ವತಿಪುರಂನಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ಬಂಜಾರ ಸೇವಲಾಲ್ ಭವನದ ನೂತನ ಕಟ್ಟಡದ ಉದ್ಘಾಟನೆಯನ್ನು ಗೃಹ ಸಚಿವ ಜಿ.
Inauguration


ತುಮಕೂರು, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಸರಸ್ವತಿಪುರಂನಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ಬಂಜಾರ ಸೇವಲಾಲ್ ಭವನದ ನೂತನ ಕಟ್ಟಡದ ಉದ್ಘಾಟನೆಯನ್ನು ಗೃಹ ಸಚಿವ ಜಿ.ಪರಮೇಶ್ವರ ನೆರವೇರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶೋಷಿತ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ ಎಂದರು.

ಲಂಬಾಣಿ ಸಮುದಾಯದ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಅನುದಾನ ಒದಗಿಸಲು ಬದ್ಧವಾಗಿದ್ದು, ಶೋಷಿತ ಸಮುದಾಯಗಳನ್ನು ಸಾಮಾಜಿಕವಾಗಿ ಮೇಲಕ್ಕೆತ್ತುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದ್ವನಿ ಇಲ್ಲದವರಿಗೆ, ದ್ವನಿ ನೀಡುವಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.

ಗ್ಯಾರೆಂಟಿ ಯೋಜನೆಗಳ ಜಾರಿಯ ನಡುವೆಯೂ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಲ್ಲದೆ ಮುಂದುವರಿಯುತ್ತಿವೆ. ಜಿಲ್ಲೆಯಲ್ಲಿ ಬಂಜಾರ ಸಮುದಾಯ ಹಾಗೂ ಗೊಲ್ಲರಹಟ್ಟಿಗಳನ್ನು ಒಳಗೊಂಡಂತೆ ಒಟ್ಟು 90 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಸರ್ಕಾರ ಘೋಷಿಸಿ ಅವರಿಗೆ ಮೂಲ ಸೌಕರ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande