
ನವದೆಹಲಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2001ರಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಸಂಸತ್ತನ್ನು ರಕ್ಷಿಸುವ ವೇಳೆ ತಮ್ಮ ಪ್ರಾಣವನ್ನೇ ಅರ್ಪಿಸಿದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಯೋಧರ ಅಪ್ರತಿಮ ಧೈರ್ಯ ಮತ್ತು ತ್ಯಾಗ ದೇಶದ ನೆನಪಿನಲ್ಲಿ ಶಾಶ್ವತವಾಗಿ ಉಳಿದಿದೆ. ಈ ಸಂದರ್ಭದಲ್ಲಿ ನಾವು ಅವರ ಕುಟುಂಬಗಳೊಂದಿಗೆ ದೃಢವಾಗಿ ನಿಂತಿದ್ದೇವೆ, ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಎದುರಿಸುವ ನಮ್ಮ ಪ್ರತಿಜ್ಞೆಯನ್ನು ನವೀಕರಿಸುತ್ತೇವೆ ಎಂದು ತಿಳಿಸಿದ ಖರ್ಗೆ, ಭಾರತವು ಭಯೋತ್ಪಾದನಾ ಶಕ್ತಿಗಳ ವಿರುದ್ಧ ಬಲಿಷ್ಠವಾಗಿ ಹಾಗೂ ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa