ಸಂಸತ್ ದಾಳಿ ಹುತಾತ್ಮರಿಗೆ ರಾಷ್ಟ್ರಪತಿ ನಮನ
ನವದೆಹಲಿ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2001ರ ಈ ದಿನದಂದು ಸಂಸತ್ತನ್ನು ರಕ್ಷಿಸುವ ವೇಳೆ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ವೀರರಿಗೆ ರಾಷ್ಟ್ರವು ನಮನ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಯೋಧರ ಶೌರ್ಯ ಮ
President


ನವದೆಹಲಿ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2001ರ ಈ ದಿನದಂದು ಸಂಸತ್ತನ್ನು ರಕ್ಷಿಸುವ ವೇಳೆ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ವೀರರಿಗೆ ರಾಷ್ಟ್ರವು ನಮನ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಯೋಧರ ಶೌರ್ಯ ಮತ್ತು ಕರ್ತವ್ಯ ನಿಷ್ಠೆಯು ನಮ್ಮ ರಾಷ್ಟ್ರೀಯ ಚೈತನ್ಯಕ್ಕೆ ನಿರಂತರ ಮಾರ್ಗದರ್ಶನ ನೀಡುತ್ತಿದೆ. ದೇಶವು ಅವರಿಗೆ ಹಾಗೂ ಅವರ ಕುಟುಂಬಗಳಿಗೆ ಸದಾ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಅಚಲ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ರಾಷ್ಟ್ರಪತಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande