
ಹಾಸನ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೆಎಂಎಬಿಆರ್2006ರ ನಿಯಮ 131 ರಿಂದ 133 ರಲ್ಲಿರುವಂತೆ, ಹಾಸನ ಮಹಾನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸುವ ಸಂಬಂಧ ನೊಂದಾಯಿತ ವಸತಿ ಕ್ಷೇಮಾಭಿವದ್ದಿ ಸಂಘಗಳು, ನೊಂದಾಯಿತ ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು, ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ರಾಜಕೀಯ ಮುಖಂಡರುಗಳು, ಹಿರಿಯ ನಾಗರೀಕರು, ಮಾದ್ಯಮದವರು ಮತ್ತು ಸಾರ್ವಜನಿಕ ಅಭಿಪ್ರಾಯಗಳನ್ನು ಸಂಗ್ರಹಿಸಲು ಮೊದಲನೇ ಸುತ್ತಿನ ಸಾರ್ವಜನಿಕ ಸಮಾಲೋಚನೆ ಸಭೆಯನ್ನು ಡಿ.18 ರಂದು ಅಪರಾಹ್ನ 12.30 ಗಂಟೆಗೆ ನಗರದ ಬಿ.ಎಂ ರಸ್ತೆಯಲ್ಲಿರುವ ಸಂತೇಪೇಟೆಯ ಮಹಾನಗರ ಪಾಲಿಕೆಯ ಕುವೆಂಪು ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹಾಸನ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ಸದರಿ ಸಭೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಸೇವಕರು ಹಾಗೂ ರಾಜಕೀಯ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿ ಹಾಸನ ಮಹಾನಗರ ಪಾಲಿಕೆಯ 2025-26ನೇ ಸಾಲಿನ ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿ ಸಭೆಯನ್ನು ಯಶಸ್ವಿಗೊಳಿಸಲು ಮಹಾನಗರಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa