
ಶಿವಮೊಗ್ಗ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಇಂದು ನಡೆಯಿತು.
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,
ಕಾರ್ಯಕರ್ತರ ಶಕ್ತಿಯೇ ಪಕ್ಷದ ಸಂಘಟನೆಯ ಆಧಾರ. ಎಲ್ಲ ಸ್ತರಗಳಲ್ಲಿ ಪಕ್ಷದ ಬಲವರ್ಧನೆ ಚಟುವಟಿಕೆಗಳ ಜೊತೆಗೆ ಪ್ರತಿ ಮನೆ, ಪ್ರತಿ ಮನಸನ್ನು ನಾವು ತಲುಪಬೇಕಾಗಿದೆ ಈ ನಿಟ್ಟಿನಲ್ಲಿ ಎಲ್ಲರು ಕಾರ್ಯೋನ್ಮುಖವಾಗ ಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಧನಂಜಯ್ ಸರ್ಜಿ, ಮಾಜಿ ಶಾಸಕರಾದ ಕೆ. ಜಿ. ಕುಮಾರಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್.ಕೆ. ಸಿದ್ದರಾಮಣ್ಣ, ಮಾಜಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa