
ನವದೆಹಲಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರೇಲ್ವೆ ಟ್ಯಾಂಕ್ ಕಂಟೇನರ್‌ಗಳ ಲೋಡಿಂಗ್ ಸಾಮರ್ಥ್ಯವನ್ನು ಹೆಚ್ಚಿಸುವ ನಾವೀನ್ಯತೆಯನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಶ್ಲಾಘಿಸಿದರು. ರೈಲು ಭವನದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ತಾಂತ್ರಿಕ ನಾವೀನ್ಯತೆಗಳು ಭಾರತೀಯ ರೈಲ್ವೆಯ ಸರಕು ಸಾಗಣೆ ವಲಯವನ್ನು ಹೆಚ್ಚು ಸ್ಪರ್ಧಾತ್ಮಕ ಹಾಗೂ ಗ್ರಾಹಕ ಸ್ನೇಹಿಯಾಗಿಸಲು ನೆರವಾಗುತ್ತವೆ ಎಂದು ಹೇಳಿದರು.
ಗ್ರಾಹಕರನ್ನು ಆಕರ್ಷಿಸುವ ಉದ್ದೇಶದಿಂದ ನಾವೀನ್ಯತೆ, ನೀತಿ ಪುನರ್‌ರಚನೆ ಹಾಗೂ ಹೊಂದಿಕೊಳ್ಳುವ ಬೆಲೆ ನಿಗದಿ ವ್ಯವಸ್ಥೆಗಳನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಸಚಿವರು ಸೂಚಿಸಿದರು. ಸರಕು ಸಾಗಣೆ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ರೈಲ್ವೆಯೊಳಗೆ ಇಂತಹ ನವೀನ ಪ್ರಯೋಗಗಳನ್ನು ವ್ಯಾಪಕವಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa