ದೊಡ್ಡಬಳ್ಳಾಪುರದಲ್ಲಿ ಉಪ ವಿಭಾಗ ಮಟ್ಟದ ರೌಡಿ ಪರೇಡ್
ದೊಡ್ಡಬಳ್ಳಾಪುರ, 13 ಡಿಸೆಂಬರ್(ಹಿ.ಸ.): ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಉಪ ವಿಭಾಗ ಮಟ್ಟದ ರೌಡಿ ಪರೇಡ್ ನಡೆಯಿತು. ಈ ಸಂದರ್ಭದಲ್ಲಿ ರೌಡಿ ಶೀಟ್ ಹೊಂದಿರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಸನ್ನಡ
Rowdy parade


ದೊಡ್ಡಬಳ್ಳಾಪುರ, 13 ಡಿಸೆಂಬರ್(ಹಿ.ಸ.):

ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಉಪ ವಿಭಾಗ ಮಟ್ಟದ ರೌಡಿ ಪರೇಡ್ ನಡೆಯಿತು.

ಈ ಸಂದರ್ಭದಲ್ಲಿ ರೌಡಿ ಶೀಟ್ ಹೊಂದಿರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಸನ್ನಡತೆಯಿಂದ ಸಮಾಜದಲ್ಲಿ ಶಾಂತಿಯುತ ಜೀವನ ನಡೆಸುವಂತೆ ಹಾಗೂ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಕಟ್ಟುನಿಟ್ಟಾದ ಸೂಚನೆ ಹಾಗೂ ಸೂಕ್ತ ತಿಳುವಳಿಕೆ ನೀಡಲಾಯಿತು.

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕ್ರಮಗಳನ್ನು ಪೊಲೀಸ್ ಇಲಾಖೆ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande