
ಗದಗ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಸಮೀಪ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಳ್ಳಾರಿ ಮೂಲದ ಜಿತೇಂದ್ರ ರೆಡ್ಡಿ (25) ಎಂದು ಗುರುತಿಸಲಾಗಿದೆ.
ಬಳ್ಳಾರಿಯಿಂದ ದಾಂಡೇಲಿಗೆ ಹೊರಟಿದ್ದ ಕಾರು ಬಿಂಕದಕಟ್ಟಿ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಚಾಲಕ ಜಿತೇಂದ್ರ ರೆಡ್ಡಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಇದ್ದ ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಅಪಘಾತಕ್ಕೆ ಕಾರಣಗಳ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP