
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಇತ್ತೀಚೆಗೆ ಗೋವಾ–ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಅಮೆರಿಕದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವನ್ನು ಅರಿತು ತಕ್ಷಣ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಬೆಳಗಾವಿ ಜಿಲ್ಲೆಯ ಖಾನಾಪುರದ ಮಾಜಿ ಶಾಸಕಿಯಾದ ಡಾ. ಅಂಜಲಿ ನಿಂಬಾಳ್ಕರ್ ಅವರ ಸೇವಾ ಮನೋಭಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವೈದ್ಯ ವೃತ್ತಿಯಿಂದ ಸಕ್ರಿಯ ರಾಜಕೀಯಕ್ಕೆ ಬಂದಿದ್ದರೂ, ಸಕಾಲದಲ್ಲಿ ರೋಗಿಯ ನೆರವಿಗೆ ಧಾವಿಸಿದ ಡಾ. ಅಂಜಲಿಯವರ ಸಮಯಪ್ರಜ್ಞೆ ಮತ್ತು ಮಾನವೀಯತೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಅಧಿಕಾರವಿರಲಿ ಅಥವಾ ಇಲ್ಲದಿರಲಿ, ಜನಸೇವೆಯ ವಿಷಯ ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ನೆರವಿಗೆ ನಿಲ್ಲುವ ಅಂಜಲಿಯಂತಹವರು ಸಮಾಜಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕಷ್ಟದಲ್ಲಿರುವ ಜೀವಗಳಿಗೆ ಇನ್ನಷ್ಟು ನೆರವು ಸಿಗುವಂತೆ ಭಗವಂತರು ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಕರುಣಿಸಲಿ ಎಂದು ಅವರು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa