
ಧಾರವಾಡ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿಗೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃಧ್ಧಿ ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಮರಾಠ ಸಮುದಾಯದ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮರಾಠ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ-ಧಾರವಾಡ-ಒನ್ ಸೇವಾ ಕೇಂದ್ರಗಳಲ್ಲಿ ಡಿಸೆಂಬರ್ 20, 2025 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸ್ಸೈಟ್ ಗೆ ಭೇಟಿ ನೀಡಬಹುದು ಅಥವಾ ನಿಗಮದ ಜಿಲ್ಲಾ ಕಛೇರಿ ಸಹಾಯವಾಣಿ 0836-2957829 ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa