ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ
ಶಿವಮೊಗ್ಗ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾ
ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ


ಶಿವಮೊಗ್ಗ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೀರಮಹಿಳೆ ಪ್ರಶಸ್ತಿಗೆ ಅರ್ಹತೆಗಳು : 18 ರಿಂದ 45ವರ್ಷ ವಯೋಮಿತಿಯೊಳಗಿನ ಒಬ್ಬ ಮಹಿಳೆ ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದು.

ತಾವು ಮಾಡಿದ ಸಾಧನೆ ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 01 ರಿಂದ ಡಿಸೆಂಬರ್ 31ರೊಳಗಾಗಿ ಇರಬೇಕು. ವೀರಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆ ಮಾಡಿರಬೇಕು. ಪ್ರಶಸ್ತಿಗೆ ಸಂಬಂಧಿಸಿದ ಮಹಿಳೆಯ ತಂದೆ/ತಾಯಿ ಪೋಷಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25,000 ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಇದನ್ನು ಪ್ರತಿ ವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.

ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹತೆಗಳು : ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಶ್ರೇಷ್ಟ ಮಟ್ಟದ ಸಾಧನೆಗಳನ್ನು ಕೈಗೊಂಡಿರಬೇಕು. ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಮತ್ತು ಸ್ಥಳಗಳಲ್ಲಿ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪಧಾಧಿಕಾರಿಗಳು ಸ್ವೀಕರಿಸಬಹುದು.

ಆಸಕ್ತರು ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ. ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:22/12/2025ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande