
ಹುಬ್ಬಳ್ಳಿ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಬಿಜೆಪಿ ಕಾರ್ಯಲಯದಲ್ಲಿ ಆಯೋಜಿಸಲಾಗಿದ್ದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಬಿ.ಎಲ್ .ಎ -2 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯಾಗಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗವು ದೇಶದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿದೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ನಕಲು ಹಾಗೂ ದೋಷಪೂರಿತ ಮತದಾರರನ್ನು ತೆಗೆದುಹಾಕಿ ಪಟ್ಟಿಯನ್ನು ಶುದ್ಧೀಕರಿಸುವುದು ಇದರ ಪ್ರಮುಖ ಗುರಿಯಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಈ ಪ್ರಕ್ರಿಯೆಯನ್ನು ನಿರ್ವಹಿಸುತ್ತಾರೆ. SIR ಮೂಲಕ 'ಒಬ್ಬ ವ್ಯಕ್ತಿ, ಒಂದು ಮತ' ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದರು.
ಚುನಾವಣಾ ಪ್ರಜಾಪ್ರಭುತ್ವದ ಯಶಸ್ಸಿಗೆ ನಿಖರವಾದ ಮತದಾರರ ಪಟ್ಟಿಯ ಅಗತ್ಯವಿದೆ. ನಮ್ಮ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರು ಯಾವುದೇ ತೊಂದರೆ ಇಲ್ಲದೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪಟ್ಟಿಯನ್ನು ದೋಷರಹಿತವಾಗಿ ಇಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa