ಸ್ವಂತ ಹಣ ಸಂಗ್ರಹಿಸಿ ರಸ್ತೆ ಮಾಡಿದ ರೈತರು
ಗದಗ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಜಮೀನಿಗೆ ಹೋಗುವ ಮುಖ್ಯ ರಸ್ತೆ ದುರಸ್ತೆ ಮಾಡುವಂತೆ ಕ್ಷೇ
ಫೋಟೋ


ಗದಗ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಜಮೀನಿಗೆ ಹೋಗುವ ಮುಖ್ಯ ರಸ್ತೆ ದುರಸ್ತೆ ಮಾಡುವಂತೆ ಕ್ಷೇತ್ರದ ಶಾಸಕ ಸಿ.ಸಿ. ಪಾಟೀಲ್, ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ರೊಚ್ಚಿಗೆದ್ದ ಅನ್ನದಾತರು ಸ್ವತಃ ಹಣ ಸಂಗ್ರಹಿಸಿ ರಸ್ತೆ ದುರಸ್ತೆ ಕೆಲಸ ಆರಂಭಿಸಿದ್ದಾರೆ.

ಲಿಂಗದಾಳ ಗ್ರಾಮದ ಬಹುತೇಕ ಜನರು ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಜಮೀನಿಗೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ 10 ರಿಂದ 15 ಕಿಲೋಮೀಟರ್ ಸುತ್ತಿ ಹೋಗುವ ದುಸ್ಥಿತಿ ನಿರ್ಮಾಣವಾಗಿತ್ತು. ಉಳುಮೆ ಕಾರ್ಯ, ಬೆಳೆ ಸಾಗಣೆ ಮಾತ್ರವಲ್ಲದೆ, ಇದೇ ಮಾರ್ಗವಾಗಿ ಸ್ಮಶಾನಕ್ಕೂ ತೆರಳಬೇಕಾಗಿದ್ದು, ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದರೆ ಅಂತ್ಯಸಂಸ್ಕಾರಕ್ಕೂ ಪರದಾಡುವ ಸ್ಥಿತಿ ಎದುರಾಗಿತ್ತು.

ಈ ಸಮಸ್ಯೆ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಪದೇಪದೇ ಮನವಿ ಸಲ್ಲಿಸಿದರೂ ರಸ್ತೆ ದುರಸ್ತೆ ಮಾಡುವ ಗೋಜಿಗೆ ಯಾರೂ ಮುಂದಾಗಲಿಲ್ಲ. ಕೊನೆಗೆ ಎಲ್ಲಾ ರೈತರು ಸಭೆ ನಡೆಸಿ, ತಾವೇ ರಸ್ತೆ ದುರಸ್ತೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ರೈತರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ₹500, ₹2,000, ₹4,000 ರೂಪಾಯಿ ಹಣ ಸಂಗ್ರಹಿಸಿ, ಶ್ರಮದಾನ ಹಾಗೂ ಜೆಸಿಬಿ ಮೂಲಕ ತಾತ್ಕಾಲಿಕ ರಸ್ತೆ ದುರಸ್ತೆ ಕಾರ್ಯ ಕೈಗೊಳ್ಳಲಾಗಿದೆ.

ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದಲೇ ಅನುದಾನದಲ್ಲಿ ರಸ್ತೆ ದುರಸ್ತೆ ಮಾಡಿಸದಿದ್ದರೆ, ಚುನಾವಣೆಗಳನ್ನು ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಅನ್ನದಾತರು ಎಚ್ಚರಿಕೆ ನೀಡಿದ್ದಾರೆ.

ಸ್ವಂತ ಹಣ ಹಾಕಿ ರಸ್ತೆ ದುರಸ್ತೆ ಮಾಡಿಕೊಳ್ಳುತ್ತಿರುವ ಮೂಲಕ “ನಮಗೆ ಯಾರ ಸಹಾಯವೂ ಬೇಡ, ನಮ್ಮ ಸಮಸ್ಯೆಯನ್ನು ನಾವು ತಾವೇ ಬಗೆಹರಿಸಿಕೊಳ್ಳುತ್ತೇವೆ” ಎಂಬ ಕಠಿಣ ಸಂದೇಶವನ್ನು ಸರ್ಕಾರಕ್ಕೆ ರೈತರು ಕಳುಹಿಸಿದ್ದಾರೆ. ಇನ್ನು ಮುಂದೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಂದಿಸಿ ಶಾಶ್ವತ ರಸ್ತೆ ನಿರ್ಮಾಣ ಮಾಡುತ್ತಾರಾ ಎಂಬುದು ಕಾದು ನೋಡಬೇಕಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande