ವಿಶೇಷ ಚೇತನರಿಗೆ ಸವಲತ್ತು ವಿತರಣೆ
ತುಮಕೂರು, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಹಾಗೂ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ''ವಿಶೇಷ ಚೇ
Parmeshwar


ತುಮಕೂರು, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಹಾಗೂ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 'ವಿಶೇಷ ಚೇತನರಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಾನವೀಯ ದೃಷ್ಟಿಕೋನ ಇರಬೇಕು, ವಿಕಲಚೇತನರಾಗಿ ಜನಿಸಿದವರಿಗೆ ಅಥವಾ ಬೇರೆ ಬೇರೆ ಕಾರಣಗಳಿಂದ ಶಾರೀರಿಕವಾಗಿ ಜೀವನ ಮಾಡಲು ಸಾಧ್ಯವಾಗದವರಿಗೆ ನೆರವಾಗಲು ಸರ್ಕಾರವು ಬೃಹತ್ ಕಾರ್ಯಕ್ರಮ ರೂಪಿಸಿದೆ ಎಂದರು.

ವಿಶೇಷ ಚೇತನರಿಗೆ ಶಿಕ್ಷಣ ನೀಡಿ, ಅವರು ಸ್ವಾವಲಂಬಿ ಜೀವನ ನಡೆಸಲು ಸರ್ಕಾರವು ಎಲ್ಲ ರೀತಿಯ ಅನುಕೂಲ ಕಲ್ಪಿಸಲಾಗುತ್ತಿದೆ. ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ಸಹ ವಿತರಿಸಿ ಅವರ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸಹಾಯಕವಾಗಿದೆ. ಇಂದು ಸುಮಾರು 5 ಕೋಟಿ ವೆಚ್ಚದಲ್ಲಿ 5000 ಜನ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಎಲ್ಲ ಪರಿಕರಗಳು ವಿಶೇಷ ಚೇತನರ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಶೇ. 40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರಿಗೆ ಮಾಸಿಕ 1500 ಮಾಸಾಶನ ನೀಡುವ ಕಾರ್ಯಕ್ರಮ ಜಾರಿಯಲ್ಲಿದೆ. ಯುಡಿಐಡಿ ಕಾರ್ಡ್ ಬಳಸಿ ಕರ್ನಾಟಕದ ಯಾವುದೇ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande