
ಧಾರವಾಡ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಧಾರವಾಡ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಕಾರ್ಯಕ್ರಮದಡಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಪ್ರಯುಕ್ತ ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ ಚಟುವಟಿಕೆಗೆ ಕ್ರಿಯಾ ಯೋಜನೆ ಗುರಿಗನುಗುಣವಾಗಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಭಾಗದ ಕುಶಲಕರ್ಮಿಗಳು ವೆಬ್‍ಸೈಟ್ ಮೂಲಕ ಡಿಸೆಂಬರ್ 31, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2324798 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa