

ರಾಯಚೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಹಾಗೂ ರವಿ ಬೋಸರಾಜು ಅವರು ಜಂಟಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪೋತ್ನಾಳದ ಸ್ನೇಹ ಜ್ಯೋತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ ನಾಯಕ್ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
ಪ್ರಾಥಮಿಕ ಹಾಗೂ ಪ್ರೌಢ ಹಂತದಿಂದ ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹೊಂದುವಲ್ಲಿ ಪೋಷಕರ ಪಾತ್ರ ಮುಖ್ಯ. ಪೋಷಕರ ಸಹಕಾರದಿಂದ ವಿದ್ಯಾಸಂಸ್ಥೆಯಲ್ಲಿ ಉತ್ತಮ ವಿದ್ಯಾರ್ಥಿಗಳು ರೂಪುಗೊಂಡು ಶಾಲೆಗೆ ಕೀರ್ತಿ ಬರುವಂತಾಗುತ್ತದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸ್ನೇಹ ಜ್ಯೋತಿ ಶಾಲೆಯ ಸೇವೆ ಶ್ಲಾಘನೀಯವಾಗಿದ್ದು, ಶಿಕ್ಷಕರ ಪ್ರಾಮಾಣಿಕ ಬೋದನೆ ಮತ್ತು ಪೋಷಕರ ಸಹಕಾರದಿಂದ ಶಾಲೆ ಬೆಳೆದಿದೆ ಎಂದು ಹೇಳಿದರು.
ಶಾಲಾ ವಾರ್ಷಿಕೋತ್ಸವ ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಪ್ರತಿಭೆ ಬೆಳಕಿಗೆ ಬಾರಲಿದೆ ಹಾಗೂ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವುದರೊಂದಿಗೆ ಅವರ ಶೈಕ್ಷಣಿಕ ಸಾಮರ್ಥ್ಯ ಇಮ್ಮುಡಿಗೊಳ್ಳಲಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್