
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯುತ್ತಮ ಸಾಧನವಾಗಿದ್ದು, ಮನರಂಜನೆಯ ಜೊತೆಗೆ ದೈಹಿಕ ಸಾಮರ್ಥ್ಯ ವೃದ್ಧಿಗೆ ಪ್ರತಿದಿನ ನಿಯಮಿತ ಕ್ರೀಡಾ ಚಟುವಟಿಕೆ ಅಗತ್ಯವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಂದು ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಶಿರೂರು ಪಾರ್ಕ್‌ನಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ ಟೀಂ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್‌ಗೆ ಅವರು ಚಾಲನೆ ನೀಡಿದರು. ಯುವಕರೊಂದಿಗೆ ಸೇರಿ ಬ್ಯಾಟ್ ಬೀಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದ ಅವರು, ಯುವಜನತೆಯಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. ಕ್ರೀಡೆ ಶಿಸ್ತು, ತಂಡಭಾವನೆ ಮತ್ತು ಆರೋಗ್ಯಕರ ಜೀವನಶೈಲಿಗೆ ದಾರಿ ಮಾಡಿಕೊಡುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa