
ದಾವಣಗೆರೆ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಡೆದು, ಬಳಿಕ ನಡೆದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಶಾಮನೂರು ಶಿವಶಂಕರಪ್ಪ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು. ಗೌರವ ಸೂಚಕವಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.
ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಸೇವೆಗಳನ್ನು ಸ್ಮರಿಸಿದ ಮುಖ್ಯಮಂತ್ರಿ, ಅವರ ನಿಧನದಿಂದ ರಾಜ್ಯ ರಾಜಕೀಯಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು. ಈ ವೇಳೆ ಸಚಿವರು, ಶಾಸಕರು, ಎಲ್ಲ ಪಕ್ಷದ ಮುಖಂಡರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಹಾಜರಿದ್ದು, ತಮ್ಮ ನೆಚ್ಚಿನ ನಾಯಕನಿಗೆ ಕಂಬನಿ ಮಿಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa