
ನವದೆಹಲಿ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಬಾಗಲಕೋಟೆಯ ಸಂಸದರಾದ ಪಿ.ಸಿ. ಗದ್ದಿಗೌಡರ್ ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಉತ್ತರ ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳು, ಇತ್ತೀಚಿನ ಯೋಜನೆಗಳ ವೇಗವರ್ಧನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತಂತೆ ಸಂಸತ್ ಭವನದಲ್ಲಿ ವಿವರವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿಗೆ ರೈಲ್ವೆ ಸಂಪರ್ಕ ಅತ್ಯಂತ ಪ್ರಮುಖವಾಗಿದ್ದು, ಜನಸಾಮಾನ್ಯರು, ರೈತರು ಹಾಗೂ ಕೈಗಾರಿಕಾ ವಲಯಕ್ಕೆ ಉತ್ತಮ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa