ಸಿರುಗುಪ್ಪ ಬಿಡಾಡಿ ದನ : ಕಾನೂನು ರೀತ್ಯ ಕ್ರಮ
ಸಿರುಗುಪ್ಪ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಬಿಡಾಡಿ ದನಕರುಗಳ ಮಾಲೀಕರು ತಮ್ಮ ಮನೆಯಲ್ಲಿಯೇ ಕಟ್ಟಿಕೊಂಡು ಪೋಷಿಸಬೇಕು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತ ಗಂಗಾಧರ ಅವರು ತಿಳಿಸಿದ್ದಾರೆ. ಸಿರುಗುಪ್ಪ ಪಟ್ಟಣದಲ್ಲಿ ಬಿಡಾಡಿ ದನಕರುಗಳ ಹಾವಳಿ ಹೆಚ್ಚಾಗಿದ
ಸಿರುಗುಪ್ಪ ಬಿಡಾಡಿ ದನ : ಕಾನೂನು ರೀತ್ಯ ಕ್ರಮ


ಸಿರುಗುಪ್ಪ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಬಿಡಾಡಿ ದನಕರುಗಳ ಮಾಲೀಕರು ತಮ್ಮ ಮನೆಯಲ್ಲಿಯೇ ಕಟ್ಟಿಕೊಂಡು ಪೋಷಿಸಬೇಕು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತ ಗಂಗಾಧರ ಅವರು ತಿಳಿಸಿದ್ದಾರೆ.

ಸಿರುಗುಪ್ಪ ಪಟ್ಟಣದಲ್ಲಿ ಬಿಡಾಡಿ ದನಕರುಗಳ ಹಾವಳಿ ಹೆಚ್ಚಾಗಿದ್ದು, ರಸ್ತೆ ಸೇರಿದಂತೆ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಹಾಗಾಗಿ ಮಾಲೀಕರು ತಮ್ಮ ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande