ನಾಡು ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ ಶಾಮನೂರು ಶಿವಶಂಕರಪ್ಪ
ಗದಗ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಾಮನೂರು ಶಿವಶಂಕರಪ್ಪ ಅವರು ನಾಡು ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ. ಅಂತಹವರನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ
ಫೋಟೋ


ಗದಗ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಶಾಮನೂರು ಶಿವಶಂಕರಪ್ಪ ಅವರು ನಾಡು ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ. ಅಂತಹವರನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನೊಳಗೂ ಕ್ರಿಯಾಶೀಲರಾಗಿದ್ದರು. ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾಗಿಯೂ ಬಹಳಷ್ಟು ಸಾಮಾಜಿಕ ಸೇವೆ ಮಾಡಿದ್ದಾರೆ. ಎಲ್ಲರನ್ನೂ ಸಮುದಾಯದಲ್ಲಿ ಒಗ್ಗೂಡಿಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದರು. ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿದ್ದರು ಎಂದು ತಿಳಿಸಿದ್ದಾರೆ.

ಅವರು ತಮ್ಮ ಜೀವನದಲ್ಲಿ ಬಹುದೊಡ್ಡ ಸಾಧನೆಗಳನ್ನು ಮಾಡಿದ್ದಾರೆ. ಹತ್ತಾರು ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಸಾದರ ಸಮುದಾಯ ಹಾಗೂ ಅನೇಕ ಬಡ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಬೆಳೆಯಲು ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆ.ಎಚ್‌.ಪಾಟೀಲ, ಡಿ.ಆರ್‌.ಪಾಟೀಲರ ಜತೆಗೆ ಆತ್ಮೀಯ ಸಂಬಂಧ ಹೊಂದಿದ್ದರು. ನನ್ನ ಮೇಲೆ ಸಾಕಷ್ಟು ಪ್ರೀತಿ ಇತ್ತು. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಸಂಘಟನೆಯೊಳಗೆ ಅವರದ್ದೇ ಶೈಲಿಯಲ್ಲಿ ಬಲ ತುಂಬಿದ್ದರು. ಅವರ ನಿಧನದಿಂದ ಕರ್ನಾಟಕಕ್ಕೆ ಬಹುದೊಡ್ಡ ಹಾನಿ ಮಾಡಿದೆ. ಜತೆಗೆ ಸಮಾಜಕ್ಕೆ ಹೆಚ್ಚಿನ ನೋವು ತರಿಸಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande