ಮಾನವ - ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ : ಡಾ. ಕೆ.ಎನ್ ಬಸವರಾಜ
ಸಂಡೂರು, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ - ವನ್ಯಜೀವಿಗಳ ಸಂಘರ್ಷವನ್ನು ತಡೆಯಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ. ಅರಣ್ಯ
ಮಾನವ - ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ : ಡಾ. ಕೆ.ಎನ್ ಬಸವರಾಜ


ಮಾನವ - ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ : ಡಾ. ಕೆ.ಎನ್ ಬಸವರಾಜ


ಸಂಡೂರು, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ - ವನ್ಯಜೀವಿಗಳ ಸಂಘರ್ಷವನ್ನು ತಡೆಯಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.

ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಕಾಯ್ದೆ ಹಾಗೂ ಅಪರಾಧಗಳ ವೈಜ್ಞಾನಿಕ ತನಿಖೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಸಂಡೂರಿನ ಗುರುಭವನದಲ್ಲಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಸಹಾಯಕ ನಿರ್ದೇಶಕ ಶೇಷಾದ್ರಿ, ಆರೋಗ್ಯ ಇಲಾಖೆಯ ಸೂಪರಿಂಟೆಂಡೆಂಟ್ ವೆಂಕಟೇಶ್, ಮತ್ತು ನಿವೃತ್ತ ಡಿಸಿಎಫ್ ಸಿಎಂ ಅಮ್ಮಣ್ಣವರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಪಶುಸಂಗೋಪನೆಯ ಇಲಾಖೆಯ ಉಪನಿರ್ದೇಶಕ ಡಾ.ಎಸ್ ಉಪ್ಪಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande