
ಬಳ್ಳಾರಿ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ `ಎ' ಗ್ರೂಪ್ ಗುರುತಿಸಿ ಪ್ರತ್ಯೇಕ ಮೀಸಲಾತಿ ಸೌಲಭ್ಯ ನೀಡಲು ಆಗ್ರಹಿಸಿ ಡಿಸೆಂಬರ್ 19 ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಸಮುದಾಯಗಳ ಜಿಲ್ಲಾಧ್ಯಕ್ಷ ಶಿವಕುಮಾರ್ ಅವರು ತಿಳಿಸಿದ್ದಾರೆ.
ಪತ್ರಿಕಾಭವನದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 59 ಅಲೆಮಾರಿ ಸಮುದಾಯಗಳಿಗೆ ಶೇ. 1 ರ ಮೀಸಲಾತಿಯನ್ನು ನೀಡಲಾಗಿದೆ. ಅಲೆಮಾರಿ ಸಮುದಾಯಗಳಿಗೆ ಭಾರತದಲ್ಲೇ ಮಾದರಿಯಾಗುವ ರೀತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. 49 ನೈಜ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲಾಗುತ್ತದೆ ಎಂದರು.
ಈ ಕುರಿತು ಕರ್ನಾಟಕ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ ಹಿಂಪಡೆದು, ಪ್ರತ್ಯೇಕ ಮೀಸಲಾತಿ ನೀತಿಯನ್ನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು.
ಅಲೆಮಾರಿ ಸಮುದಾಯಗಳ ಸಂಘಟನೆಗಳ ಮುಖಂಡರಾದ ಸುಬ್ಬಣ್ಣ, ಕಲ್ಯಾಣಂ ಶಂಕರ್, ಮಹೇಶ್, ಗುಂಡಪ್ಪ ಕಟ್ಟಿಮನಿ, ರಾಮಾಂಜಿನಿ, ಡಿ. ಬಾಬು ಸೇರಿದಂತೆ ಇತರೆ ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್