
ಕೊಪ್ಪಳ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ 2025-26 ನೇ ಸಾಲಿನ ನಾಗರಿಕ ಸೇವೆಗಳಾದ ಐ.ಎ.ಎಸ್ ಅಥವಾ ಕೆ.ಎ.ಎಸ್ ತರಬೇತಿ ಪಡೆಯುತ್ತಿರುವ ರಾಜ್ಯದ ಅರ್ಹ ಬ್ರಾಹ್ಮಣ ಪದವೀಧರರಿಗೆ ತರಬೇತಿ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಯೋಜನೆಯಡಿ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ಸಂಜೆ 5 ಗಂಟೆಯವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್