ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ : ಅರ್ಜಿ ಅವಧಿ ವಿಸ್ತರಣೆ
ಬಳ್ಳಾರಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆ ಮತ್ತು ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಸೌಲ
ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ : ಅರ್ಜಿ ಅವಧಿ ವಿಸ್ತರಣೆ


ಬಳ್ಳಾರಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆ ಮತ್ತು ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಸೌಲಭ್ಯಗಳಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.

ಭೌತಿಕ ಮತ್ತು ಆರ್ಥಿಕ ಗುರಿ ನಿಗದಿ ಪಡಿಸಿದ್ದು, ಈ ಯೋಜನೆಗಳಿಗೆ ಮಹಿಳಾ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande