ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಗೆ ಅರ್ಜಿ ಆಹ್ವಾನ
ಹೊಸಪೇಟೆ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸಲು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತ
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಗೆ ಅರ್ಜಿ ಆಹ್ವಾನ


ಹೊಸಪೇಟೆ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ

ಪ್ರೋತ್ಸಾಹಿಸಲು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ವೇತಾ ತಿಳಿಸಿದ್ದಾರೆ.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳು ಮತ್ತು ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಸಂಕಷ್ಟ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯವನ್ನು ಮಾಡಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಡಿಸೆಂಬರ್.30 ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಅಥವಾ ದೂ. 08394223583 ಸಂಖ್ಯೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande