
ಹೊಸಪೇಟೆ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳಿಯ ಸಂಘ-ಸಂಸ್ಥೆಗಳು, ಎನ್‍ಜಿಓ, ಪ್ರಾಣಿ ಕಲ್ಯಾಣ ಸಂಸ್ಥೆಗಳೊಂದಿಗೆ ಅನುಷ್ಠಾನಗೊಳಿಸಲು ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಾಣಿಕೆ, ಪಾಲನೆ ಮತ್ತುಪೋಷಣೆ ಮಾಡಲು ಇಚ್ಛೆಯುಳ್ಳವರು 07 ದಿನಗೊಳಗಾಗಿ ಪೌರಾಯುಕ್ತರ ಹೆಸರಿಗೆ ಮನವಿಯನ್ನು ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬೇಕೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್