
ಗದಗ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಗಳು-1963ರ ಅಡಿಯಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ಈಗಾಗಲೇ ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ನಿರೀಕ್ಷಕರ ಕಛೇರಿ ಗದಗ 2ನೇ ವೃತ್ತ, ಗದಗ ಇಲ್ಲಿ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಮಿಕರು ಇರುವ ಹಾಗೂ ಕಾರ್ಮಿಕರು ಇಲ್ಲದೇ ಇರುವ ಸಂಸ್ಥೆಗಳು ಹಾಗೂ ದಿನಾಂಕ: 31-12-2025ರ ಅಂತ್ಯಕ್ಕೆ ನವೀಕರಣ ಮುಕ್ತಾಯಗೊಂಡಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳು ಸಹ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ ನಿಗಧಿತ ಆನ್-ಲೈನ್ ಮೂಲಕ ಶುಲ್ಕವನ್ನು ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಹಾಗೂ ನವೀಕರಣವಾದ ಪತ್ರ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ.
ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರಿಗೆ ತಿಳುವಳಿಕೆ ನೀಡಲಾಗಿದೆ, ಹಾಗೂ ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು 2 ನೇ ವೃತ್ತ ಕಾರ್ಮಿಕ ನಿರೀಕ್ಷಕ ಉಮೇಶ್ ಎಸ್ ಹುಲ್ಲಣ್ಣವರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP