
ಮುನಿರಾಬಾದ್, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಹೋಗುತ್ತಿದ್ದ ಭಕ್ತರ ವಾಹನಕ್ಕೆ ಮುನಿರಾಬಾದ್ ಟಿ.ಬಿ. ಡ್ಯಾಂ - ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಸಮೀಪ ಉಂಟಾದ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟು 15ಕ್ಕೂ ಭಕ್ತಾಧಿಗಳು ಗಾಯಾಳುಗಳನ್ನು ಮುನಿರಾಬಾದ್ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಪನಹಳ್ಳಿ ತಾಲೂಕಿನ ಹೊನ್ನೆರಹಳ್ಳಿಯಿಂದ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕಾಗಿ ಸುಮಾರು 20 ಭಕ್ತರು ಟ್ರ್ಯಾಕ್ಟರ್‍ನಲ್ಲಿ ಪ್ರಯಾಣಿಸುತ್ತಿದ್ದರು. ಟ್ರ್ಯಾಕ್ಟರ್ ಮುನಿರಾಬಾದ್ ಟಿ.ಬಿ. ಡ್ಯಾಂ ಹಾಗೂ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಸಮೀಪ ಆಗಮಿಸುತ್ತಿದ್ದಂತೆಯೇ ಬೆಂಗಳೂರಿನಿಂದ ಅಫಲ್‍ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಟ್ರ್ಯಾಕ್ಟರ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಣ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್