ದಟ್ಟ ಮಂಜು ; ಉತ್ತರ ಭಾರತದಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯ-ಇಂಡಿಗೋ
ನವದೆಹಲಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲ ಆರಂಭವಾಗುತ್ತಿದ್ದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮುಂಜಾನೆ ಮಂಜು ಆವರಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕೆಲವೊಮ್ಮೆ ವಿಮಾನಗಳ ಹಾರಾಟ ಮತ್ತು ಆಗಮನದಲ್ಲಿ ವಿಳಂಬ ಉಂಟಾಗಬಹುದು ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಯಾಣಿಕರಿಗೆ ಮುನ್ನೆ
Indigo


ನವದೆಹಲಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಚಳಿಗಾಲ ಆರಂಭವಾಗುತ್ತಿದ್ದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮುಂಜಾನೆ ಮಂಜು ಆವರಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕೆಲವೊಮ್ಮೆ ವಿಮಾನಗಳ ಹಾರಾಟ ಮತ್ತು ಆಗಮನದಲ್ಲಿ ವಿಳಂಬ ಉಂಟಾಗಬಹುದು ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಇಂಡಿಗೋ ಪ್ರಯಾಣಿಕರಿಗೆ ಸಲಹೆ ನೀಡಿದ್ದು, goindigo.in/check-flight-status ವೆಬ್‌ಸೈಟ್ ಮೂಲಕ ನವೀಕರಿತ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದೆ.

ಮಂಜಿನ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದ್ದು, ಸಾಧ್ಯವಾದಷ್ಟು ಅನಾನುಕೂಲತೆಯನ್ನು ಕಡಿಮೆ ಮಾಡಲು ಮತ್ತು ಕಾಯುವ ಸಮಯವನ್ನು ಆರಾಮದಾಯಕವಾಗಿಸಲು ಅಗತ್ಯ ಹೊಂದಾಣಿಕೆಗಳನ್ನು ಮಾಡಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ.

ಪ್ರಯಾಣಿಕರ ಸಹಕಾರ ಮತ್ತು ವಿಶ್ವಾಸಕ್ಕೆ ಧನ್ಯವಾದಗಳನ್ನು ತಿಳಿಸಿರುವ ಇಂಡಿಗೋ, ಸುರಕ್ಷಿತ ಹಾಗೂ ಸುಗಮ ಪ್ರಯಾಣ ಒದಗಿಸಲು ಸಂಸ್ಥೆ ಸದಾ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande