ಸತ್ಯ ಮತ್ತು ನ್ಯಾಯ ಸೇಡಿನ ರಾಜಕೀಯವನ್ನು ಸೋಲಿಸಿದೆ : ಹರಿಪ್ರಸಾದ
ಬೆಂಗಳೂರು, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗಾಂಧಿ ಕುಟುಂಬವನ್ನು ರಾಜಕೀಯವಾಗಿ ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಳ್ಳು ಖಾಸಗೀ ದೂರನ್ನು ದಾಖಲಿಸಿ ತನಿಖಾ ಸಂಸ್ಥೆಗಳ ದುರಪಯೋಗ ಮಾಡಿಕೊಂಡಿರುವುದಕ್ಕೆ ದೆಹಲಿ‌ ನ್ಯಾಯಾಲಯ ಕಪಾಳಮೋಕ
Hariprasad


ಬೆಂಗಳೂರು, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗಾಂಧಿ ಕುಟುಂಬವನ್ನು ರಾಜಕೀಯವಾಗಿ ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಳ್ಳು ಖಾಸಗೀ ದೂರನ್ನು ದಾಖಲಿಸಿ ತನಿಖಾ ಸಂಸ್ಥೆಗಳ ದುರಪಯೋಗ ಮಾಡಿಕೊಂಡಿರುವುದಕ್ಕೆ ದೆಹಲಿ‌ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ , ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು ಮಾತ್ರವಲ್ಲ, ಚಾರ್ಜ್ ಶಿಟ್ ಅನ್ನೇ ಸಂಪೂರ್ಣವಾಗಿ ತಿರಸ್ಕರಿಸಿರುವುದು ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಾಂಧಿ ಕುಟುಂಬದ ಮೇಲೆ ಮೋ-ಶಾ ಜೋಡಿ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಮಾಡಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯವೇ ತಕ್ಕ ಉತ್ತರ ಕೊಟ್ಟಿದೆ. ಬೆದರಿಕೆ, ಕಿರುಕುಳ, ಸೇಡಿನ ಅತ್ಯಂತ ಹೀನ ರಾಜಕಾರಣ ಮಾಡಿದ ಮೋ-ಶಾ ಜೋಡಿಗೆ ಇದೇ ಪ್ರಕರಣದಲ್ಲಿ ಕೋರ್ಟ್ ನೀಡಿರುವ ಒಂದೊಂದು ಹೇಳಿಕೆಗಳು ಕಪಾಳಮೋಕ್ಷವಾಗಿದೆ.

ಸ್ವತಂತ್ರ ಚಳುವಳಿಯಲ್ಲಿ‌ ಮಹತ್ತರ ಪಾತ್ರವಹಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಆಧಾರ ರಹಿತ ಆರೋಪ ಮಾಡಿರುವ ಬಿಜೆಪಿ ಪಕ್ಷ ಮತ್ತು ನರೇಂದ್ರ‌ ಮೋದಿ ಸರ್ಕಾರ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಸೇಡಿನ ರಾಜಕೀಯವನ್ನು ಮುಂದುವರೆಸುತ್ತಲೇ ಬರುತ್ತಿರುವ ಮೋ-ಶಾಗಳಿಗೆ ನ್ಯಾಯಲಯ ಪಾಠ ಕಲಿಸಿದೆ, ಮುಂದೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande