ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಸಭೆ ಅನುಮೋದನೆ
ಬೆಳಗಾವಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಹಾಗೂ 2025ನೇ ಸಾಲಿನ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆಯಲ್ಲಿ ಅನುಮೋದನೆ ದೊರೆಯಿತು. ಬೆಳಗಾವಿಯ ಸುವರ್ಣಸೌಧದಲ್ಲ
approval


ಬೆಳಗಾವಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಹಾಗೂ 2025ನೇ ಸಾಲಿನ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆಯಲ್ಲಿ ಅನುಮೋದನೆ ದೊರೆಯಿತು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಗಿತ್ತು.

ಎರಡೂ ತಿದ್ದುಪಡಿ ವಿಧೇಯಕಗಳನ್ನು ಪರ್ಯಾವಲೋಚನೆಗೆ ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಮಂಡಿಸಿದರು. ಸಂಕ್ಷಿಪ್ತ ಪರ್ಯಾವಲೋಚನೆಯ ನಂತರ ಪ್ರಸ್ತಾವವನ್ನು ಸ್ಪೀಕರ್‌ ಯು ಟಿ ಖಾದರ್‌ ಅವರು ಸಭೆಯ ಮತಕ್ಕೆ ಹಾಕಿದರು. ಪ್ರಸ್ತಾವಕ್ಕೆ ಅನುಮೋದನೆ ದೊರೆಯಿತು.

ತಿದ್ದುಪಡಿಗಳಿಂದ ಹೆಚ್ಚಿನ ಕಾರ್ಮಿಕರಿಗೆ ಅನುಕೂಲ:

ತಿದ್ದುಪಡಿ ಕುರಿತು ಮಾತನಾಡಿದ ಸಚಿವ ಲಾಡ್‌ ಅವರು, ಎರಡೂ ವಿಧೇಯಕಗಳ ತಿದ್ದುಪಡಿಯಿಂದ ಕಲ್ಯಾಣ ಯೋಜನೆಗಳ ವ್ಯಾಪ್ತಿ ಇನ್ನಷ್ಟು ಹೆಚ್ಚಾಗಲಿದೆ. ಇದರ ವ್ಯಾಪ್ತಿಯಲ್ಲಿ ಇನ್ನಷ್ಟು ಕಾರ್ಮಿಕರು ಸೇರ್ಪಡೆಯಾಗಲಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande