ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಯಶಸ್ವಿಯಾಗಲಿ : ಬಿ. ನಾಗೇಂದ್ರ
ಬಳ್ಳಾರಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರಿ ಜನವರಿ 03 ರಂದು ನಡೆಸಲು ಉದ್ದೇಶಿಸಿರುವ ಮಹರ್ಷಿ ಶ್ರೀ ವಾಲ್ಮೀಕಿ ಅವರ ಪುತ್ಥಳಿಯ ಅನಾವರಣವನ್ನು ಯಶಸ್ವಿಗೊಳಿಸೋಣ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರು ತಿಳಿಸಿದ್ದಾರೆ.
ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಯಶಸ್ವಿಯಾಗಲಿ : ಬಿ. ನಾಗೇಂದ್ರ


ಬಳ್ಳಾರಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರಿ ಜನವರಿ 03 ರಂದು ನಡೆಸಲು ಉದ್ದೇಶಿಸಿರುವ ಮಹರ್ಷಿ ಶ್ರೀ ವಾಲ್ಮೀಕಿ ಅವರ ಪುತ್ಥಳಿಯ ಅನಾವರಣವನ್ನು ಯಶಸ್ವಿಗೊಳಿಸೋಣ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರು ತಿಳಿಸಿದ್ದಾರೆ.

ಅವರ ಗೃಹ ಕಚೇರಿಯಲ್ಲಿ ಮಂಗಳವಾರ ಭೇಟಿ ಮಾಡಿದ ಬಳ್ಳಾರಿ ನಗರ ಮತ್ತು ಜಿಲ್ಲೆಯ ವಾಲ್ಮೀಕಿ ನಾಯಕರ ಸಮಾಜದ ಮುಖಂಡರ ಜೊತೆಯಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿ, ಶ್ರೀವಾಲ್ಮೀಕಿ ಮಹರ್ಷಿಗಳ ಪುತ್ಥಳಿ ಸ್ಥಾಪನೆ ಪ್ರತಿಯೊಬ್ಬರಿಗೂ ಸಂಬಂಧಿಸಿದ್ದು. ಈ ವಿಚಾರದಲ್ಲಿ ರಾಜಕೀಯಕ್ಕೆ ಅವಕಾಶ ಬೇಡ ಎಂದರು.

ವಾಲ್ಮೀಕಿ ನಾಯಕರ ಸಮಾಜದ ಪರಶುರಾಮುಡು, ದೇವಿನಗರ ಹೊನ್ನೂರಪ್ಪ, ಹಗರಿ ಗೋವಿಂದ, ಹಾವಂಭಾವಿ ಲೋಕೇಶ್, ಗಂಗಾಧರ, ಗಂಗಪ್ಪ, ಯರಗುಡಿ ಸೋಮಣ್ಣ, ಮುದಿ ಮಲ್ಲಯ್ಯ, ಪಿ.ಜಗನ್ನಾಥ, ಹುಲಿಯಪ್ಪ, ದುರ್ಗಾ ಮೋಹನ್, ಸತ್ಯನಾರಾಯಣ, ವಿ.ಎನ್.ಶ್ರೀನಾಥ್, ರಾಮಣ್ಣ, ಸೇರಿದಂತೆ ಹಲವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande