
ನವದೆಹಲಿ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ಅತೀವ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa