
ಕೊಪ್ಪಳ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ವಿವಿಧ ತರಕಾರಿ ಬೀಜದ ಕಿಟ್ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮೇಲಿನ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ರೈತರು ಜನವರಿ 6 ರೊಳಗಾಗಿ ಅರ್ಜಿ ಸಮೇತ ಅಗತ್ಯವಾದ ದಾಖಲಾತಿಗಳನ್ನು ಸಂಬ0ಧಪಟ್ಟ ಆಯಾ ತಾಲ್ಲೂಕಾ ತೋಟಗಾರಿಕಾ ಕಛೇರಿಯಲ್ಲಿ ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೊಪ್ಪಳ ಮೊ: 9611888607, ಗಂಗಾವತಿ ಮೊ: 9480257282, ಕುಷ್ಟಗಿ ಮೊ:9743518608, ಯಲಬುರ್ಗಾ ಮೊ:9945644338 ಹಾಗೂ ಕೇಂದ್ರ ಸ್ಥಾನಿಕ ಸಹಾಯಕರು, ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ (ಜಿಪಂ) ಕೊಪ್ಪಳ. ಮೊ:8095359179 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್