
ನವದೆಹಲಿ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 1971ರಲ್ಲಿ ಈ ದಿನದಂದು ಭಾರತೀಯ ಸಶಸ್ತ್ರ ಪಡೆಗಳು ಅಪಾರ ಧೈರ್ಯ, ಶೌರ್ಯ ಮತ್ತು ನಿಖರವಾದ ಕಾರ್ಯತಂತ್ರದ ಮೂಲಕ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿ ಶರಣಾಗುವಂತೆ ಒತ್ತಾಯಿಸಿದ ಐತಿಹಾಸಿಕ ವಿಜಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ.
ವಿಜಯ್ ದಿವಸ್ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಈ ಜಯವು ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧ ಗುರಾಣಿಯಾಗಿ ಕಾರ್ಯನಿರ್ವಹಿಸಿದ್ದು, ಮಾನವೀಯ ಮೌಲ್ಯಗಳನ್ನು ರಕ್ಷಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ಮಿಲಿಟರಿ ಸಾಮರ್ಥ್ಯ ಮತ್ತು ಶೌರ್ಯವನ್ನು ಜಗತ್ತಿನ ಮುಂದೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.
ಯುದ್ಧಭೂಮಿಯಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಧೈರ್ಯಶಾಲಿ ಹುತಾತ್ಮರಿಗೆ ನಮನ ಸಲ್ಲಿಸಿದ ಅಮಿತ್ ಶಾ, ಅವರ ತ್ಯಾಗವು ಸದಾ ದೇಶದ ಜನತೆಗೆ ಪ್ರೇರಣೆಯಾಗಿ ಉಳಿಯಲಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa