
ಗದಗ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025 ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ನ್ನು ದಿನಾಂಕ:08/12/2025 ರಂದು ಪ್ರಕಟಿಸಲಾಗಿತ್ತು. ಮೊದಲ ಪಟ್ಟಿಯಲ್ಲಿ ಸೀಟು ಹಂಚಿಕೆಯಾದ ಕಾಲೇಜುಗಳಿಗೆ ಸೇರದ ಅಭ್ಯರ್ಥಿಗಳು ಎರಡನೇ ಸುತ್ತಿನ ಹಂಚಿಕೆಗಾಗಿ ತಮ್ಮ ಅಭಿಮತವನ್ನು ದಾಖಲಿಸಿದ್ದು ಅದರಂತೆ ಎರಡನೇ ಸೀಟು ಹಂಚಿಕೆ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಭ್ಯರ್ಥಿಗಳು ಈಗ ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸವರ್ಡ ಬಳಸಿ ದಿನಾಂಕ:15-12-2025 ರಿಂದ 20-12-2025 ರವರೆಗೆ ನಿಗದಿತ ಶುಲ್ಕದ ಚಲನನ್ನು ಮುದ್ರಿಸಿಕೊಂಡು ಭಾರತೀಯ ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಿ ಅದರ ಮೂಲ ಪ್ರತಿ ಹಾಗೂ ಇತರ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ಸಲ್ಲಿಸಿ ದಾಖಲಾತಿ ಪತ್ರವನ್ನು ಪಡೆದುಕೊಳ್ಳುವುದು ಹಾಗೂ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿಗೆ ಸೇರ್ಪಡೆಗೊಳ್ಳಲು ಸೂಚಿಸಿದೆ.
ಮೊದಲ ಪಟ್ಟಿಯಲ್ಲಿ ಸೀಟು ಹಂಚಿಕೆಯಾಗಿ ಸೇರ್ಪಡೆಯಾಗದ ಅಭ್ಯರ್ಥಿಗೆ ಈ ಬಾರಿ ಸೀಟು ಹಂಚಿಕೆಯಾಗಿದ್ದಲ್ಲಿ ಇದು ಅವರಿಗೆ ಕೊನೆಯ ಅವಕಾಶವಾಗಿರುತ್ತದೆ ಅಂಥವರನ್ನು ಮುಂದಿನ ಅಯ್ಕೆ ಪಟ್ಟಿಯಲ್ಲಿ ಪರಿಗಣಿಸಲಾಗುವುದಿಲ್ಲ
ಮೊದಲ ಪಟ್ಟಿಯಲ್ಲಿ ಗುರುತು ಬಂದು ಸೀಟು ಹಂಚಿಕೆಯಾಗದ ಅಭ್ಯರ್ಥಿಗಳಿಗೆ ಇದು ಮೊದಲ ಹಂಚಿಕೆಯಾಗಿದ್ದು ಅವರು ಈಗ ಹಂಚಿಕೆಯಾದ ಕಾಲೇಜಿಗೆ ಸೇರ್ಪಡೆಗೊಳ್ಳಲು ಬಯಸದೇ ಇದ್ದಲ್ಲಿ ಯಾವುದೇ ಶುಲ್ಕವನ್ನು ಪಾವತಿಸದೆ ಎಂದು ಅಭಿಮತವನ್ನು ಇದೇ ಅವಧಿಯಲ್ಲಿ ದಾಖಲಿಸಬೇಕು.
ಎರಡನೇ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ನು÷್ನ ದಿನಾಂಕ:23-12-2025 ರಂದು ಬಿಡುಗಡೆಗೊಳಿಸಲಾಗುವುದು. ಇದರಂತೆ 2ನೇ ಪಟ್ಟಿಯಲ್ಲಿ ಸೀಟು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸದ ಎಂದು ಅಭಿಮತವನ್ನು ದಾಖಲಿಸಿ ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆಗಾಗಿ ದಿನಾಂಕ:23-12-2025 ರಿಂದ ದಿನಾಂಕ:24-12-2025 ರವರೆಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಕಾಲೇಜುಗಳ ಆಯ್ಕೆಯ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿದೆ .
ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸೂಚಿಸುವುದು. ಹೆಚ್ಚಿನ ಮಾಹಿತಿಗಾಗಿ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP