
ಬೆಳಗಾವಿ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ, ಈ ಪ್ರಕರಣದಲ್ಲಿ ಇಡಿ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಹೈಕೋರ್ಟ್ ತೀರ್ಪನ್ನು ಬೆಂಬಲಿಸಿ ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಕೇಂದ್ರ ಸರ್ಕಾರವು ರಾಜಕೀಯ ದ್ವೇಷದಿಂದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ, ಕೇಂದ್ರ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಗೆಡವುತ್ತಿದೆ ಎಂದು ಧಿಕ್ಕಾರ ಕೂಗಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa