ಜಿಲ್ಲಾ ಪ್ರಾಣಿದಯಾ ಸಂಘದ ಸಭೆ
ರಾಯಚೂರು, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪ್ರಾಣಿದಯಾ ಸಂಘದ ಸಭೆ


ರಾಯಚೂರು, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಸೆಂಬರ್ 17ರ ಬುಧವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿದಯಾ ಸಂಘದ ವತಿಯಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕು. ಅಲ್ಲದೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶದಲ್ಲಿನ ಅಂಶಗಳನ್ನು ಕೂಡಲೇ ಕ್ರಿಯಾಶೀಲರಾಗಿ ಸೂಕ್ತ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸರ್ಕಾರಿ ಹಾಗೂ ಖಾಸಗಿ ಶೈಕ್ಷಣಿಕ ಸಂಸ್ಥೆಗಳು, ಜಿಲ್ಲಾ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಸಾರ್ವಜನಿಕ ಕ್ರೀಡಾಂಗಣಗಳು ಅಥವಾ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಬಸ್ ಡಿಪೋಗಳು, ರೈಲು ನಿಲ್ದಾಣಗಳು ಇತ್ಯಾದಿ ಸಾರ್ವಜನಿಕ ಪ್ರದೇಶಗಳಲ್ಲಿ ಇರುವ ಎಲ್ಲಾ ಬೀದಿ ನಾಯಿಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳು ಸೆರೆಹಿಡಿದು ಅವುಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದಷ್ಟು ಬೇಗನೆ ಕಾರ್ಯಾಚರಣೆಯನ್ನು ಆರಂಭಿಸಬೇಕೆಂದರು.

ನಾಯಿ ಹಿಡಿಯುವ ತಂಡವು ಸಂಬಂಧಪಟ್ಟ ಸಾರ್ವಜನಿಕ ಸಂಸ್ಥೆಗಳಿಗೆ ಭೇಟಿ ನೀಡುವ ದಿನಾಂಕ ಮತ್ತು ಸಮಯವನ್ನು ಮುಂಚಿತವಾಗಿ ತಿಳಿಸಬೇಕು. ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಹಿಡಿದ ನಂತರ ಅವುಗಳಿಗೆ ಆಶ್ರಯ ನೀಡಲು ನಿಗದಿತ ಕಟ್ಟಡ ಸ್ಥಳಗಳಿಗೆ ಸ್ಥಳಾಂತರಿಸಬೇಕು.

ಅಲ್ಲದೆ ರೇಬೀಸ್ ಪೀಡಿತ ನಾಯಿಗಳನ್ನು ಪ್ರತ್ಯೇಕ ಕಟ್ಟಡ ನಿರ್ವಹಣೆ ಮಾಡಬೇಕು. ಬೀದಿ ನಾಯಿಗಳನ್ನು ಸಂತಾನಹರಣ ಶಸ್ತ್ರಚಿಕಿತ್ಸೆಗೊಳಿಸುವ ಕುರಿತು. ಪ್ರಾಣಿ ಕಲ್ಯಾಣ ಮಂಡಳಿಯಿಂದ ಮಾನ್ಯತೆ ಪಡೆದ ಎನ್.ಜಿ.ಒ. ಗಳಲ್ಲದೇ ಹೆಚ್ಚಿನ ಸಂಸ್ಥೆಗಳಿಂದ ಪ್ರಸ್ತಾವನೆ ಪಡೆದು ನಿಯಮಾನುಸಾರ ಕ್ರಮವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯ ಉಪ ನಿರ್ದೇಶಕರಾದ ಪೋಮ್‍ಸಿಂಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ತಿಮ್ಮಪ್ಪ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ವಿಸಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande